2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಸೋಲಿನ ಮುನ್ಸೂಚನೆ ನೀಡಿದ ಆರ್‌ಎಸ್‌ಎಸ್‌..?!!

ದೆಹಲಿ : ಇತ್ತೀಚೆಗಷ್ಟೇ ನಾಗ್ಪುರದಲ್ಲಿ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಕರೆಸಲಾಗಿತ್ತು. ಈ ವಿಚಾರ ಸಂಬಂಧ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪ ಡಿಸಿದ್ದಲ್ಲದೆ, ಸ್ವತಃ ಪ್ರಣಬ್‌ ಪುತ್ರಿ ಶರ್ಮಿಷ್ಠಾ ಮುಖರ್ಜಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದರು.

ಇಷ್ಟು ದಿನ ತೆರೆಮರೆಯಲ್ಲಿದ್ದ ಪ್ರಣಬ್‌ ಮುಖರ್ಜಿ ಈಗ ರಾಷ್ಟ್ರರಾಜಕಾರಣದಲ್ಲಿ ಭಾರೀ ಸುದ್ದಿಯಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯ ವೇಳೆಗೇ ಈ ಬೆಳವಣಿ ಗೆ ನಡೆದಿರುವುದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

20119ರಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು,  ವಿರೋಧ ಪಕ್ಷಗಳು ಮೋದಿ ನೇತೃತ್ವದ ಸರ್ಕಾರವನ್ನು ಬದಿಗೆ ಸರಿಸಲು ಎಲ್ಲಾ ರೀತಿಯ ಕಸರತ್ತು ಶುರು ಮಾಡಿವೆ. ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಪ್ರಣಬ್‌ ಮುಖರ್ಜಿ ನಾಗ್ಪುರದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು,  2019ರ ಲೋಕಸಭಾ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಸ್ಪಷ್ಟ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದರೆ ಆರ್‌ಎಸ್‌ಎಸ್‌ ಪ್ರಣಬ್ ಮುಖರ್ಜಿಯವರನ್ನು ಪ್ರಧಾನಿ ಹುದ್ದೆಯಲ್ಲಿ ಕೂರಿಸುವ ಹುನ್ನಾರ ನಡೆಸುತ್ತಿದೆ ಎಂದು ಶಿವಸೇನೆ ಅನುಮಾನ ವ್ಯಕ್ತಪಡಿಸಿದೆ.

ಈ ಕುರಿತು ಶಿವಸೇನೆಯ ನಾಯಕ ಸಂಜಯ್‌ ರಾವತ್‌  ಹೇಳಿಕೆ ನೀಡಿದ್ದು, ಈ ಬಾರಿ ಬಿಜೆಪಿ ಕನಿಷ್ಠ 110 ಸ್ಥಾನಗಳನ್ನು  ಕಡಿಮೆ ಗೆಲ್ಲಲಿದೆ. ಒಂದು ವೇಳೆ  ಬಿಜೆಪಿಗೆ ಸ್ಪಷ್ಟ ಬಹುಮತ ಬರದೇ ಹೋದಲ್ಲಿ ಪ್ರಣಬ್‌ ಮುಖರ್ಜಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಆದರೆ ನಿಜಕ್ಕೂ ಪ್ರಣಬ್‌ ಮುಖರ್ಜಿ ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ಒಪ್ಪಿಕೊಂಡು ಪ್ರಧಾನಿಯಾಗುತ್ತಾರಾ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರದೇ, ಮೋದಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುತ್ತಾರಾ ಎಂಬ ಪ್ರಶ್ನೆಗಳಿಗೆ  ಪ್ರಣಬ್‌ ಆರ್‌ಎಸ್‌ಎಸ್‌ ಕಚೇರಿಗೆ ನೀಡಿದ್ದ ಭೇಟಿ ಮುನ್ನುಡಿಯಾಗಿದ್ದು, ಸದ್ಯ ಈ ವಿಚಾರವಾಗಿ ಎಲ್ಲೆಡೆ ಚರ್ಚೆ ಶುರುವಾಗಿದೆ.

 

Leave a Reply

Your email address will not be published.