ಜಯನಗರ ಚುನಾವಣೆಗೆ ಕ್ಷಣಗಣನೆ : ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಅಧಿಕಾರಿಗಳಿಂದ ದಾಳಿ

ಬೆಂಗಳೂರು : ಜಯನಗರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ಬಿಜೆಪಿ  ಕಾರ್ಯಕರ್ತರು ಅಕ್ರಮವಾಗಿ ಹಣ , ಮದ್ಯ ಹಂಚಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.

ಸಾರಕ್ಕಿ ವಾರ್ಡ್, ಜೆ ಪಿ ನಗರ ಮೊದಲ ಹಂತದ ಬಡಾವಣೆಗಳಲ್ಲಿನ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಮದ್ಯ ಹಾಗೂ ಹಣ ಸಂಗ್ರಹಿಸಿಟ್ಟುರುವ ಕುರಿತು ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಬಿಜೆಪಿ ಕಾರ್ಯಕರ್ತ ನರಸಿಂಹರಾಜ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಮನೆಯಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳನ್ನು ಮನೆಯಿಂದ ಹೊರಹಾಕಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದಾಳಿ ಮಾಡಿದ ಸಂದರ್ಭದಲ್ಲಿ ಮನೆಯಲ್ಲಿ ಯಾವುದೇ ವಸ್ತುಗಳು ದೊರೆತಿಲ್ಲ ಎನ್ನಲಾಗಿದೆ. ಆದರೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಇದರಲ್ಲಿ ಕಾಂಗ್ರೆಸ್ ನ ಕೈವಾಡವಿರುವುದಾಗಿ ಆರೋಪಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com