ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ : ಕೆ.ಎಸ್ ಈಶ್ವರಪ್ಪ

ಭಾರತೀಯ ಜನತಾ ಪಕ್ಷದ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ‘ ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದೇವೆ. ಈಗ ಕಾಂಗ್ರೆಸಿಗರೆ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ. ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಶಾಸಕರನ್ನ ಕಾಂಗ್ರೆಸ್ ಅಧ್ಯಕ್ಷರನ್ನೆ ಮಾರಾಟ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಬಹುಮತ ಸಾಧಿಸಿತ್ತು, ಅದು ಯಡಿಯೂರಪ್ಪನವರ ಶಕ್ತಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವವರು ಕಾಂಗ್ರೆಸ್ ನ ಅತೃಪ್ತರು. ಮೈತ್ರಿ ಸರ್ಕಾರದ‌ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಈಗ ಯಾರು ಅಂತ ನಾನು ಹೇಳಲಾರೆ. ನೀವೆ ಮುಂದಿನ ದಿನಗಳಲ್ಲಿ ಕಾದು ನೋಡಿ ‘ ಮಾಜಿ ಕೆ.ಎಸ್.ಈಶ್ವರಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com