ಭಾರತದ ಗಡಿಯೊಳಗೆ ನುಸುಳಲು ಯತ್ನ : ಐವರು ಉಗ್ರರು ಫಿನಿಶ್‌

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ ಐವರು ಉಗ್ರರನ್ನು ಭಾರತೀಯ ಯೋಧರು ಹತ್ಯೆ ಮಾಡಿದ್ದಾರೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರಾನ್ ಸೆಕ್ಟರ್‌ ಬಳಿ ಭಾನುವಾರ ಮುಂಜಾನೆ ಪಾಕಿಸ್ತಾನದ ಗಡಿಯಿಂದ ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಕಣ್ಣಿಗೆ ಈ ದೃಶ್ಯ ಕಂಡು ಬಂದಿದ್ದು, ಕೂಡಲೇ ಗುಂಡು ಹಾರಿಸಿದ್ದಾರೆ. ಈ ವೇಳೆ ಉಗ್ರರು ಪ್ರತಿದಾಳಿ ಮಾಡಿದ್ದು,  ಈ ವೇಳೆ ಎಚ್ಚರಾದ ಯೋಧರು ಉಗ್ರರನ್ನು ಸುತ್ತುವರಿದು  ಗುಂಡು ಹಾರಿಸಿದ್ದಾರೆ. ಈ ವೇಳೆ ಐವರು ಉಗ್ರರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಥಳದಲ್ಲಿ ಇನ್ನಷ್ಟು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com