ಬಳ್ಳಾರಿ : NEET ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆ : ವಿದ್ಯಾರ್ಥಿನಿ ಆತ್ಮಹತ್ಯೆ

ಬಳ್ಳಾರಿ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಟಿ.ಬಿ ಡ್ಯಾಂ ನಿವಾಸಿ ಕೋಮಲವಲ್ಲಿ (18) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೆಲವು ದಿನಗಳ ಹಿಂದಷ್ಟೇ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಅದರಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದ ಕೋಮಲವಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳ್ಳಾರಿ ಜಿಲ್ಲೆಯ ಸಂಡೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಕೋಮಲವಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಟಿ.ಬಿ.ಡ್ಯಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com