ನಿಂತಿದ್ದ ಶಾಲಾ ಬಸ್‌ಗೆ ಖಾಸಗಿ ಬಸ್‌ ಡಿಕ್ಕಿ : ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ದಾರುಣ ಸಾವು

ಲಖನೌ : ಹೆದ್ದಾರಿಯಲ್ಲಿ ನಿಂತಿದ್ದ ಶಾಲಾವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಒಬ್ಬ ಶಿಕ್ಷಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದಶದ ಕನೌಜ್ ಜಿಲ್ಲೆಯ ತಿರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರು ಕಬೀರ್ ನಗರದ ಪ್ರಭಾ ದೇವಿ ವಿದ್ಯಾಲಯಕ್ಕೆ ಸೇರಿದವರೆಂದು ತಿಳಿದು ಬಂದಿದ್ದು,  ಹರಿದ್ವಾರಕ್ಕೆ 2 ಪ್ರತ್ಯೇಕ ಬಸ್‍ಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಲಾ ಬಸ್‍ನ ಡೀಸೆಲ್ ಖಾಲಿಯಾಗಿದ್ದರಿಂದ ಇನ್ನೊಂದು ಬಸ್‍ನ ಮೂಲಕ ಡೀಸೆಲ್ ತುಂಬಿಸಿಕೊಳ್ಳುತ್ತಿದ್ದರು. ಅದೇ ಸಮಯ ವೇಗವಾಗಿ ಬಂದ ಇನ್ನೊಂದು ಖಾಸಗಿ ಬಸ್ ನಿಂತಿದ್ದ ಶಾಲಾ ಬಸ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್  2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com