ತಲ್ವಾರ್‌ನಿಂದ ಕೇಕ್‌ ಕತ್ತರಿಸಿ ಹಾಲಿನ ಅಭಿಷೇಕ ಮಾಡಿಸ್ಕೊಂಡು ಪೊಲೀಸರ ಅತಿಥಿಯಾದ ಭೂಪ..

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ತಲ್ವಾರ್ ನಿಂದ ಕೇಕ್ ಕತ್ತರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ನೋಡಿದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ.

ಶುಭಂ ಬಿಜವಾಡ ಎಂಬ ಯುವಕನೇ ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಯುವಕನಾಗಿದ್ದಾನೆ. ರಸ್ತೆ ಮಧ್ಯದಲ್ಲಿಯೇ ತಲ್ವಾರ್ ನಿಂದ ಕೇಕ್ ಕತ್ತರಿಸುತ್ತಾ ಹಾಲಿನ ಅಭಿಷೇಕ ಮಾಡಿಕೊಂಡಿರುವ ಶುಭಂ ಬಿಜವಾಡ ಈ ವಿಚಿತ್ರ ಆಚರಣೆಯ ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್ ಆಗಿದ್ದು, ಪರ ವಿರೋಧ ಕಾಮೆಂಟ್ ಗಳು ಬಂದಿವೆ.

ಈ ಹಿಂದೆ ಇರ್ಶಾದ್ ಎಂಬಾತ ಕೂಡ ತಲ್ವಾರ್ ನಿಂದ ಕೇಕ್ ಕತ್ತರಿಸಿ, ತಲ್ವಾರ್ ನಿಂದಲೇ ಕೇಕ್ ತಿನ್ನಸಿ ಹುಟ್ಟು ಹಬ್ಬ ಆಚರಿಸಿಕೊಂಡು ಸುದ್ದಿಯಾಗಿದ್ದ. ಈ ಬೆನ್ನಲ್ಲೇ ಈಗ ಮತ್ತೊಬ್ಬ ಯುವಕ ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ವಿಚಾರ  ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಶುಭಂನನ್ನು ಬಂಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com