ಅನಿತಾ ಕುಮಾರಸ್ವಾಮಿ V/S ನಿಖಿಲ್‌ : ರಾಮನಗರದಲ್ಲಿ ಟಿಕೆಟ್‌ಗಾಗಿ ಅಮ್ಮ- ಮಗನ ಫೈಟ್‌ ?

ರಾಮನಗರ : ಜೆಡಿಎಸ್‌ನ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುತ್ತಾರೋ ಅಥವಾ ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೋ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ರಾಮನಗರದಲ್ಲಿ ನನ್ನ ಹೆಸರು ಹಾಗೂ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿಬರುತ್ತಿರುವುದು ನಿಜ. ಮೊದಲು ರಾಮನಗರ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಲಿ. ದಿನಾಂಕ ಘೋಷಣೆ ಬಳಿಕ, ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಬಗ್ಗೆ ನಿರ್ಧರಿಸುತ್ತಾರೆ ಎಂದಿದ್ದಾರೆ.

ಈ ಹಿಂದೆ ಕುಮಾರಸ್ವಾಮಿ ನಿಖಿಲ್‌ ರಾಜಕೀಯಕ್ಕೆ ಬರುವುದು ಇಷ್ಟವಿಲ್ಲ. ಅವನು ಸಿನಿಮಾ ಮಾಡಿಕೊಂಡಿರುತ್ತಾನೆ ಎಂದು ಹೇಳಿದ್ದರು. ಆದರೆ ಜೆಡಿಎಸ್‌ನಲ್ಲಿ ಅಥವಾ ರಾಜಕಾರಣದಲ್ಲಿ ನಿಖಿಲ್ ಕುಮಾರಸ್ವಾಮಿ ನೇರವಾಗಿ ಕಾಣಿಸಿಕೊಳ್ಳದಿದ್ದರೂ ಮೈತ್ರಿ ಸರ್ಕಾರ ರಚನೆಯಲ್ಲಿ ಹಾಗೂ ತಂದೆಯ ಪರ, ಅಜ್ಜನ ಪರ ಅನೇಕ ಬಾರಿ ಮಾತನಾಡಿದ್ದು, ಪಕ್ಷ ಸಂಘಟನೆ ಕೆಲಸವನ್ನೂ ಮಾಡಿದ್ದರು. ಆದರೆ ಈಗ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್‌ ಹೆಸರು ಕೇಳಿಬರುತ್ತಿದ್ದು, ಯಾರು ಅಖಾಡಕ್ಕಿಳಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published.

Social Media Auto Publish Powered By : XYZScripts.com