ಕೊಪ್ಪಳ : ತಹಸೀಲ್ದಾರ್ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ : ಲ್ಯಾಪ್ ಟಾಪ್, ದಾಖಲೆಗಳು ಬೆಂಕಿಗಾಹುತಿ

ಕೊಪ್ಪಳ : ತಹಶಿಲ್ದಾರ ಕಚೇರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಲ್ಯಾಪ್‌ಟಾಪ್ ಸೇರಿದಂತೆ ದಾಖಲೆಗಳು ಬೆಂಕಿಗಾಹುತಿಯಾಗಿವೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶಿಲ್ದಾರ ಕಚೇರಿಯಲ್ಲಿನ ಚುನಾವಣಾ ವಿಭಾಗದ ಕೊಠಡಿಗೆ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರತಿವರ್ಷವೂ ತಹಶಿಲ್ದಾರರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ ಅಗ್ನಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ತಹಶಿಲ್ದಾರ ಸಂತೋಷ ರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com