Cricket : ಭಾರತ vs ಅಫಘಾನಿಸ್ತಾನ : ಬೆಂಗಳೂರಿನಲ್ಲಿ ಐತಿಹಾಸಿಕ ಟೆಸ್ಟ್ ಪಂದ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರದಿಂದ ಭಾರತ ಹಾಗೂ ಅಫಘಾನಿಸ್ಥಾನ ತಂಡಗಳ ನಡುವೆ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಅಫಘಾನಿಸ್ಥಾನ ಭಾರತದ ವಿರುದ್ಧ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲಿದ್ದು, ಈ ಐತಿಹಾಸಿಕ ಪಂದ್ಯಕ್ಕೆ ಉದ್ಯಾನ ನಗರಿ ಸಾಕ್ಷಿಯಾಗಲಿದೆ.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ವಿಫಲರಾದ ವೇಗದ ಬೌಲರ್ ಮೊಹಮ್ಮದ್ ಶಮಿ ಬದಲಿಗೆ ದೆಹಲಿಯ ನವದೀಪ್ ಸೈನಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಮುರಳಿ ವಿಜಯ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಟಿ-20 ಸರಣಿಯಲ್ಲಿ ಬಾಂಗ್ಲಾದೇಶ ವಿರುದ್ಧ 3-0ರಿಂದ ಗೆದ್ದು ಬೀಗಿದ್ದ ಅಫಘಾನಿಸ್ಥಾನ ಮತ್ತೊಂದು ಅಚ್ಚರಿಯ ಫಲಿತಾಂಶ ನೀಡುವ ವಿಶ್ವಾಸದಲ್ಲಿದೆ. ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ಧ ಅಫ್ಘನ್ ಸ್ಪಿನ್ನರ್ ರಾಶಿದ್ ಖಾನ್ ಉತ್ತಮ ಫಾರ್ಮ್ ನಲ್ಲಿದ್ದಾರೆ.

One thought on “Cricket : ಭಾರತ vs ಅಫಘಾನಿಸ್ತಾನ : ಬೆಂಗಳೂರಿನಲ್ಲಿ ಐತಿಹಾಸಿಕ ಟೆಸ್ಟ್ ಪಂದ್ಯ

Leave a Reply

Your email address will not be published.

Social Media Auto Publish Powered By : XYZScripts.com