ಸಿಗದ ಸಚಿವ ಸ್ಥಾನ : ಶಾಮನೂರು ಶಿವಶಂಕರಪ್ಪ ಬೆಂಬಲಿಗರಿಂದ ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ

ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ ವಿಚಾರವಾಗಿ ಶ್ಯಾಮನೂರು ಶಿವಶಂರಪ್ಪ ಬೆಂಬಲಿಗರು ಡಾ. ಜಿ ಪರಮೇಶ್ವರ್ ‌ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಸದಾಶಿವನಗರದ ಪರಮೇಶ್ವರ್ ನಿವಾಸದ ಎದುರು ‌ಪ್ರತಿಭಟನೆ ನಡೆಸಿ ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಎರಡನೇ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೊಡುವಂತೆ ಡಾ ಜಿ ಪರಮೇಶ್ವರ್ ಬಳಿ ಬೆಂಬಲಿಗರ ನಿಯೋಗ ಮನವಿ ಮಾಡಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಸ್ಥಳೀಯ ನಗರ ಪಾಲಿಕೆ ಸದಸ್ಯರು ಆಗ್ರಹಿಸಿದ್ದಾರೆ.

ಒಂದು ವೇಳೆ ಸಚಿವ ಸ್ಥಾನ ಕೊಡದೆ ಇದ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಸ್ಥಳೀಯ ಸದಸ್ಯರಿಂದ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com