ಸ್ವಚ್ಛತಾ ತಾಣಗಳ ಪಟ್ಟಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಸೇರ್ಪಡೆ

ರಾಯಚೂರ : ಕೇಂದ್ರದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಮೂರನೇ ಹಂತದಲ್ಲಿ ಆಯ್ಕೆ ಮಾಡಿರುವ ದೇಶದ 10 ಸ್ವಚ್ಛತಾ ತಾಣಗಳ ಪಟ್ಟಿಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠವೂ ಸೇರ್ಪಡೆಯಾಗಿದೆ.

‘ಇಲಾಖೆಯಿಂದ ಎರಡು ಹಂತಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 100ಕ್ಕೂ ಹೆಚ್ಚಿನ ಇಂತಹ ತಾಣಗಳಲ್ಲಿ ಮೂಲ ಸೌಕರ್ಯ ಒದಗಿಸಲಾಗಿದೆ’ ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಅವರು ಮಂತ್ರಾಲಯ ಮಠಕ್ಕೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಕುಡಿಯುವ ನೀರು, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳನ್ನು ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಖಾಸಗಿ ಸಂಸ್ಥೆಗಳು ಹಾಗೂ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಯೋಜನೆಯಡಿ ದೇಣಿಗೆ ನೀಡುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ‘ಸ್ವಚ್ಛ, ಸುಂದರ ಹಾಗೂ ಸಂಪೂರ್ಣ ಮಂತ್ರಾಲಯ ಘೋಷಣೆಯೊಂದಿಗೆ ಸುಂದರ ಪರಿಸರ ನಿರ್ಮಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published.