Cricket : ಆಸೀಸ್ ವಿರುದ್ಧ ಇಂಗ್ಲೆಂಡ್ ತಂಡಕ್ಕೆ 3 ವಿಕೆಟ್ ಜಯ : ಮಿಂಚಿದ ಡೇವಿಡ್ ವಿಲ್ಲೀ

ಲಂಡನ್ನಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಬುಧವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಇಂಗ್ಲೆಂಡ್ 3 ವಿಕೆಟ್ ಗಳಿಂದ ಜಯಿಸಿದೆ. ಇದರೊಂದಿಗೆ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.

ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು ಎರಡೂ ತಂಡಗಳಿಗೆ ತಲಾ 47 ಓವರ್ ಗಳಂತೆ ಕಡಿತಗೊಳಿಸಲಾಗಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 47 ಓವರುಗಳಲ್ಲಿ 214ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರವಾಗಿ ಗ್ಲೆನ್ ಮ್ಯಾಕ್ಸ್ ವೆಲ್ 62 ಹಾಗೂ ಆಷ್ಟನ್ ಆಗರ್ 40, ಶಾನ್ ಮಾರ್ಷ್ 24 ರನ್ ಗಳಿಸಿದರು.

ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 44 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿ ಗೆಲುವು ಸಾಧಿಸಿತು. ಇಯಾನ್ ಮಾರ್ಗನ್ 69, ಜೋ ರೂಟ್ 50 ಹಾಗೂ ಡೇವಿಡ್ ವಿಲ್ಲಿ 35 ರನ್ ಗಳಿಸಿ ತಂಡದ ಗೆಲುವಿನಲ್ಲಿ ನೆರವಾದರು.

 

 

Leave a Reply

Your email address will not be published.

Social Media Auto Publish Powered By : XYZScripts.com