ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಬಂಡಾಯ : ಎಂ.ಬಿ ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ..?

ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಬಂಡಾಯ ವಿಚಾರವಾಗಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಪಟ್ಟು ಹಿಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ‌ ಮೊದಲನೇ ಬಣದ ಅತೃಪ್ತ ಶಾಸಕರಿಂದ ಮಹತ್ವದ ಸಭೆ ನಡೆಯಲಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅತೃಪ್ತ ನಾಯಕ ಎಂ ಬಿ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸತೀಶ್ ಜಾರಕಿ ಹೊಳಿ, ಡಾ ಸುಧಾಕರ್ ಸೇರಿದಂತೆ 15 ಕ್ಕೂ ಹೆಚ್ಚು ಶಾಸಕರು ಭಾಗವಹಿಸಲಿದ್ದಾರೆ.

ನಾಳೀನ ಅತೃಪ್ತ ಸಭೆಗೆ ಕಾಂಗ್ರೆಸ್ ‌ನಾಯಕರನ್ನು ಎಂಬಿ ಪಾಟೀಲ್ ಆಹ್ವಾನಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ರಿಜ್ವಾನ್ ಹರ್ಷದ್ ಗೆ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಗೆ ಸ್ಪಷ್ಟ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಿದ್ದಾರೆ.

ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಿ, ತಮಗೆ ಹಾಗು ತಮ್ಮ ಜೊತೆಯಲ್ಲಿರುವರಿಗೆ ಸಚಿವ ಸ್ಥಾನ ಕೊಡಬೇಕು, ಉಳಿದ ಶಾಸಕರಿಗೆ ನಿಗಮ ಮಂಡಳಿ ಹಂಚಿಕೆ ಮಾಡಬೇಕು, ಇನ್ಮುಂದೆ ಇಂತಹ ನಿರ್ಧಾರ ಕೈಗೊಳ್ಳಬೇಕಾದ್ರೆ ನಮ್ಮನ್ನು ಕಡೆಗಣಿಸದಂತೆ ರಾಜ್ಯದ ವರಿಷ್ಠರು ಹಾಗು ಹೈ ಕಮಾಂಡ್ ನಾಯಕರಿಗೆ ಸ್ಪಷ್ಡ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದ್ದಾರೆ.

ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆಯೂ ತೀರ್ಮಾನ ಕೈಗೊಳ್ಳಲ ಮುಂದಾಗಿದ್ದು, ಅತೃಪ್ತ ಬಣದ ಶಾಸಕರ ಮೊದಲನೇ ಸಬೆ ಕುತೂಹಲ ಮೂಡಿಸಿದೆ.

Leave a Reply

Your email address will not be published.