ಹಾಸನ : ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಯುವತಿಯ ದುರ್ಮರಣ..

ರೈಲಿನಿಂದ ಆಯತಪ್ಪಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹಿರೀಸಾವೆ ನಿಲ್ದಾಣದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮೇಟಿಮೆಳ್ಳಲ್ಲಿ ಮೂಲದ ಯುವತಿ ದಿವ್ಯಶ್ರೀ ಮೇಘನಾ (21) ಎಂಬ ಯುವತಿ ಮೃತಳಾಗಿದ್ದಾಳೆ. ನಿನ್ನೆ ಶ್ರವಣಬೆಳಗೊಳದಿಂದ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.

ಡಿಪ್ಲೊಮಾ ಮುಗಿಸಿ‌ದ ಮೇಘನಾ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ರೈಲು ಹಳಿ ಪಕ್ಕ ಬಿದ್ದ ಕೂಡಲೇ‌ ತಲೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಿಸದೇ ಯುವತಿ ಸಾವನ್ನಪ್ಪಿದ್ದಾಳೆ.

Leave a Reply

Your email address will not be published.

Social Media Auto Publish Powered By : XYZScripts.com