Cricket : ಧವನ್-ವಿಜಯ್ ಶತಕದ ಸೊಬಗು : ಉತ್ತಮ ಮೊತ್ತದತ್ತ ಟೀಮ್ ಇಂಡಿಯಾ

ಭಾರತ ಹಾಗೂ ಅಫಘಾನಿಸ್ತಾನ ತಂಡಗಳ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಐತಿಹಾಸಿಕ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 347 ರನ್ ಮೊತ್ತ ಕಲೆ ಹಾಕಿದೆ.

ಭಾರತಕ್ಕೆ ಉತ್ತಮ ಆರಂಭ ಒದಗಿಸಿದ ಎಡಗೈ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ 7ನೇ ಟೆಸ್ಟ್ ಶತಕ ಬಾರಿಸಿದರು. 96 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ 19 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿ 107 ರನ್ ಗಳಿಸಿದರು. ಭಾರತದ ಇನ್ನೋರ್ವ ಆರಂಭಿಕ ಬ್ಯಾಟ್ಸಮನ್ ಮುರಳಿ ವಿಜಯ್ ಕೂಡ ಶತಕ ಸಿಡಿಸಿದರು. 153 ಎಸೆತಗಳನ್ನು ಎದುರಿಸಿದ ಮುರಳಿ ವಿಜಯ್ 15 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 105 ರನ್ ಗಳಿಸಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿಳಿದ ಕೆ.ಎಲ್ ರಾಹುಲ್ ಅರ್ಧಶತಕ (54) ಬಾರಿಸಿ ವಿಕೆಟ್ ಒಪ್ಪಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com