Cricket : ಸ್ಪಿನ್ ದಾಳಿಗೆ ಕುಸಿದ ಅಫ್ಘನ್ ಪಡೆ : ಭಾರತಕ್ಕೆ ಇನ್ನಿಂಗ್ಸ್ ಗೆಲುವಿನ ಸಿಹಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫಘಾನಿಸ್ತಾನ ತಂಡಗಳ ನಡುವಿನ ಏಕೈಕ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 262 ರನ್ ಗಳಿಂದ ಗೆಲುವು ಸಾಧಿಸಿದೆ.

ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 474 ರನ್ ಮೊತ್ತಕ್ಕೆ ಆಲೌಟ್ ಆಯಿತು. ಅರ್ಧಶತಕ ಬಾರಿಸಿದ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 74 ರನ್ ಗಳಿಸಿದರು.

Image result for india afghanistan test match 262 run win

ಬ್ಯಾಟಿಂಗ್ ಆರಂಭಿಸಿದ ಅಫಘಾನಿಸ್ತಾನ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 109 ಮೊತ್ತಕ್ಕೆ ಆಲೌಟ್ ಆಯಿತು. ಭಾರತದ ಪರವಾಗಿ ಆರ್. ಅಶ್ವಿನ್ 4 , ರವೀಂದ್ರ ಜಡೇಜಾ 2, ಇಶಾಂತ್ ಶರ್ಮಾ 2 ವಿಕೆಟ್ ಪಡೆದರು.

365 ರನ್ ಹಿನ್ನಡೆಯಲ್ಲಿದ್ದ ಅಫಘಾನಿಸ್ತಾನ ತಂಡದ ಮೇಲೆ ಭಾರತ ಫಾಲೋ ಆನ್ ಹೇರಿತು. ಎರಡನೇ ಇನ್ನಿಂಗ್ಸ್ ನಲ್ಲಿಯೂ ಅಲ್ಪ ಮೊತ್ತಕ್ಕೆ ಕುಸಿದು ಆಲೌಟ್ ಆಯಿತು. ರವೀಂದ್ರ ಜಡೇಜಾ 4, ಉಮೇಶ್ ಯಾದವ್ 3, ಇಶಾಂತ್ ಶರ್ಮಾ 2 ಹಾಗೂ ಅಶ್ವಿನ್ 1 ವಿಕೆಟ್ ಪಡೆದರು.

 

Leave a Reply

Your email address will not be published.