ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು”ಮಾಜಿ”ಮಾಡಿದ ಜೆಡಿಎಸ್‌ ಸಚಿವ…!! ವಿಡಿಯೋ ವೈರಲ್‌

ಬೀದರ್‌ : ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಹೊಸದೊಂದು ಯಡವಟ್ಟು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಬಾಯಿ ತಪ್ಪಿ ಹೇಳಿದ್ದು ಎಚ್‌ಡಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೀದರ್ ನ ಸ್ವಗೃಹ ದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಂಡೆಪ್ಪ ಕಾಶಂಪೂರ್ ಸಹಕಾರ ಸಚಿವನಾಗಿ ಸಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ, ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಯಡವಟ್ಟು ಮಾಡಿದ್ದಾರೆ.

ಸಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಸಿಎಂ ಕುಮಾರಸ್ವಾಮಿ ಅವರು ಯಾರ ಮುಲಾಜಿನಲ್ಲಿ ಇಲ್ಲ. ಕುರ್ಚಿಗೆ ಅಂಟಿಕೊಂಡಿಲ್ಲ ಎನ್ನುವ ಮೂಲಕ ಈ ಹಿಂದೆ ಶಾಕ್‌ ನೀಡಿದ್ದರು. ಈಗ ಸಿಎಂ ಆಪ್ತ ಬಂಡೆಪ್ಪ ಕಾಶಂಪೂರ್ ಬಾಯ್ತಪ್ಪಿ ಮಾತನಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com