ತಂಗಿಯ ಕಷ್ಟ ನೋಡಲಾರದೆ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ಕೊಂದ ಸೋದರಮಾವ !

ಹೈದರಾಬಾದ್‌ : ತಂಗಿಯ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ಸೋದರ ಮಾವನೇ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಹೈದರಾಬಾದ್‌ನ ಚೈತನ್ಯಪುರಿಯಲ್ಲಿ ನಡೆದಿದೆ.

ಕೊಲೆಯಾದವರನ್ನು ಸೃಜನಾ ರೆಡ್ಡಿ ಹಾಗೂ ವಿಷ್ಣುವರ್ಧನ ರೆಡ್ಡಿ ಎಂದು ಹೆಸರಿಸಲಾಗಿದೆ. ಕೊಲೆ ಮಾಡಿದ ಮಾವನನ್ನು ಮಲ್ಲಿಕಾರ್ಜುನ ರೆಡ್ಡಿ ಎಂದು ಹೆಸರಿಸಲಾಗಿದೆ. ಶುಕ್ರವಾರ ಸೋದರ ಮಾವನೇ ಇಬ್ಬರು ಮಕ್ಕಳನ್ನು ಅಮಾನವೀಯವಾಗಿ ಹತ್ಯೆ ಮಾಡಿದ್ದು, ಸದ್ಯ ಆತ ಪೊಲೀಸರ ವಶದಲ್ಲಿದ್ದಾನೆ.

ಮಲ್ಲಿಕಾರ್ಜುನ ರೆಡ್ಡಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ತನ್ನ ತಂಗಿಯ ಮಕ್ಕಳನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದ. ಮನೆಗೆ ಬಂದ ಮಕ್ಕಳನ್ನು ಸ್ನೇಹಿತನೊಂದಿಗೆ ಸೇರಿ ಹತ್ಯೆ ಮಾಡಿದ್ದಾನೆ. ಬಳಿಕ ಇಂದು ಮಕ್ಕಳ ಮೃತದೇಹವನ್ನು ಕಾರಿನಲ್ಲಿ ಸಾಗಿಸುವಾಗ ಮನೆಯ ಮಾಲೀಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ತಂಗಿಗೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮಾವ ಈ ಕೆಲಸ ಮಾಡಿರುವುದಾಗಿ ಮೂಲಗಳು ತಿಳಿಸಿವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ.

 

Leave a Reply

Your email address will not be published.

Social Media Auto Publish Powered By : XYZScripts.com