ಭರವಸೆ ಈಡೇರಿಸದ ಮೋದಿ : ಆಶ್ವಾಸನೆ ನೆನಪಿಸಲು ಯುವಕನಿಂದ 1,350ಕಿ.ಮೀ ಪಾದಯಾತ್ರೆ

ಆಗ್ರಾ :  ಒಡಿಶಾದ 30 ವರ್ಷದ ಯುವಕನೊಬ್ಬ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಉದ್ದೇಶದಿಂದ 1,350 ಕಿಮೀ ಪಾದಯಾತ್ರೆ ಮಾಡಿದ್ದಾರೆ. ರೂರ್ಕೆಲಾದಿಂದ ಏಪ್ರಿಲ್ 16ರಂದು ಹೊರಟ ಮುಕ್ತಿಕಾಂತ ಬಿಸ್ವಾಲ್ ಪಾದಯಾತ್ರೆ ಮೂಲಕ ಗುರುವಾರ ಉತ್ತರ ಪ್ರದೇಶದ ಆಗ್ರಾ ತಲುಪಿದ್ದಾನೆ.
 ಈ ಹಿಂದೆ ಪ್ರಧಾನಿ ಮೋದಿ ಒಡಿಶಾಗೆ ಆಗಮಿಸಿದ್ದಾಗ ಬಿಸ್ವಾಲ್ ಹುಟ್ಟೂರಿಗೆ ಭೇಟಿ ಕೊಟ್ಟಿದ್ದರು. ಆಗ ಅವರು ಅಲ್ಲಿನ ಸಾರ್ವಜನಿಕರಿಗೆ  ಭರವಸೆ ನೀಡಿದ್ದರು. ಆದರೆ ಇದುವರೆಗೂ ಆ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಅದನ್ನು ನೆನಪಿಸುವ ಉದ್ದೇಶದಿಂದ ಯುವಕ ಈ ಸಾಹಸಕ್ಕೆ ಕೈಹಾಕಿದ್ದಾನೆ.
ವಿಗ್ರಹ ತಯಾರಕನಾದ ಬಿಸ್ವಾಲ್ ಊರಿನಲ್ಲಿರುವ ಆಸ್ಪತ್ರೆಯೊಂದನ್ನು ಅಭಿವೃದ್ದಿಪಡಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಆ ಭರವಸೆಯನ್ನು ಅವರಿಗೆ ನೆನಪಿಸುವ ಸಲುವಾಗಿ ಈ ಯಾತ್ರೆ ನಡೆಸಿದ್ದಾನೆ. ಇದೀಗ ಆಗ್ರಾ ತಲುಪಿರುವ ಈ ಯುವಕ ಅಲ್ಲಿನ ಬಿಸಿಯಾದ ಹವೆಯ ಕಾರಣ ಅಸ್ವಸ್ಥನಾಗಿದ್ದ. ಆತನನ್ನು ಗಮನೈಸಿದ್ದ ಕೆಲ ಸ್ಥಳೀಯರು ಅವನನ್ನು ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.
  ನಾನು ಇದಾಗಲೇ ಒಡಿಶಾದಿಂದ ಹೊರಟು, ಬಿಹಾರ, ಜಾರ್ಖಂಡ್ ಮೂಲಕ ಇದೀಗ ಉತ್ತರ ಪ್ರದೇಶ ತಲುಪಿದ್ದೇನೆ. ಇನ್ನು ಹರಿಯಾಣ ಮೂಲಕ ದೆಹಲಿ ತಲುಪಲಿದ್ದೇನೆ. ಅಲ್ಲಿ ಪ್ರಧಾನಿಯನ್ನು ಭೇಟಿಯಾಗಿ ಅವರಿಗೆ ಮನವಿ ಸಲ್ಲಿಸಲಿದ್ದೇನೆ. ಒಂದು ವೇಳೆ ಪ್ರಧಾನಿ ಭೇಟಿಗೆ ಅವಕಾಶ ದೊರಕದಿದ್ದಲ್ಲಿ ದೆಹಲಿಯಲ್ಲೇ ಧರಣಿ ಕೂರುವುದಾಗಿ ಯುವಕ ಹೇಳಿದ್ದಾನೆ.

Leave a Reply

Your email address will not be published.

Social Media Auto Publish Powered By : XYZScripts.com