ನಟ ದೊಡ್ಡಣ್ಣನ ಅಳಿಯನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಹಣದ ಪ್ರಕರಣವನ್ನು ಕೈ ಬಿಟ್ಟ ಸಿಬಿಐ !!

ಚಿತ್ರದುರ್ಗ : ಉದ್ಯಮಿ, ನಟ ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದಾಗಿ ಕೈಬಿಡಲಾಗಿದೆ.

ಕೆ.ಸಿ.ವಿರೇಂದ್ರ 2018ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಚಿತ್ರದುರ್ಗದಿಂದ ಸ್ಪರ್ಧಿಸಿದ್ದರು. 500 ರೂ. ಮತ್ತು 2000 ರೂ. ಮುಖಬೆಲೆ ನೋಟುಗಳ ಅಕ್ರಮ ಸಂಗ್ರಹ ಮಾಡಿದ್ದಾರೆ ಎಂದು ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದು, 2016ರ ಡಿಸೆಂಬರ್ 10ರಂದು ವೀರೇಂದ್ರ ಅವರ ಚಳ್ಳಕೆರೆಯಲ್ಲಿರುವ ಮನೆ, ಗೋವಾದಲ್ಲಿನ ಕ್ಯಾಸಿನೊ, ಹುಬ್ಬಳ್ಳಿಯ ಕಚೇರಿ ಸೇರಿದಂತೆ 15 ಕಡೆ ದಾಳಿ ನಡೆದಿತ್ತು.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೆ.ಸಿ.ವೀರೇಂದ್ರ ವಿರುದ್ಧ ದಾಖಲಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಎ.ಅನ್ಬಳಗನ್ ಸೂಕ್ತ ಸಾಕ್ಷ್ಯಧಾರಗಳ ಕೊರತೆಯಿಂದ ಪ್ರಕರಣವನ್ನು ಮುಕ್ತಾಯಗೊಳಿಸುವುದಾಗಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಅದರಂತೆ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ.

ಕೆ.ಸಿ.ವೀರೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದಾಗ ವಶಪಡಿಸಿಕೊಂಡಿರುವ ದಾಖಲೆಗಳನ್ನು ಮರಳಿಸುವಂತೆ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ ಸಿಬಿಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಏನ್‌ಸುದ್ದಿಗೆ ತಿಳಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com