ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಸಿದ್ದರಾಮಯ್ಯಗೆ ಎದುರಾಯ್ತು ಸಂಕಷ್ಟ : ಮಾಜಿ ಸಿಎಂ ವಿರುದ್ದ FIR ದಾಖಲು

ಬೆಂಗಳೂರು : ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಜನಪ್ರಿಯ  ಕೆಲಸಗಳನ್ನು ಮಾಡಿ ಭೇಷ್‌ ಎನಿಸಿಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ  ಸಿದ್ದರಾಮಯ್ಯನವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೈಸೂರಿನ ನ್ಯಾಯಾ ಲಯ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

25 ವರ್ಷಗಳ ಹಳೆಯ ಪ್ರಕರಣಕ್ಕೆ ಈಗ ನ್ಯಾಯಾಲಯದ ಮೂಲಕ ಮರುಜೀವ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ಪಂಚಾಯ್ತಿಯಲ್ಲಿ ಈ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಡಿಸಿಎಂ ಆಗಿದ್ದ ವೇಳೆ ನಡೆದಿದ್ದ ಭೂ ಅಕ್ರಮ ಇದಾಗಿದೆ. ಇದಲ್ಲದೆ,ಸಿಎಂ ಆಗಿದ್ದ ವೇಳೆ ತನ್ನ ಆಪ್ತರಿಗೆ ಇದೇ ರೀತಿ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿದ್ದರಾಮಯ್ಯ ಸೇರಿ ನಾಲ್ಕು ಮಂದಿ ವಿರುದ್ಧ ಕೇಸ್‌ ದಾಖಲಿಸಲು ಮೈಸೂರಿನ ನ್ಯಾಯಾಲಯ ಆದೇಶಿಸಿದೆ. ಕೋರ್ಟ್ನ ಆದೇಶದಂತೆ ಲಕ್ಷ್ಮೀಪುರಂ  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕಾನೂನು ಹೋರಾಟ ಪ್ರಾರಂಭವಾಗಿದ್ದು, ವಕೀಲ ಗಂಗರಾಜು ಹಾಗೂ ಸಂಗಮೇಶ್ ಎಂಬುವವರು ದಾಖಲಿಸಿದ್ದ ದೂರು ಈಗ ಮರುಜೀವ ಪಡೆದುಕೊಂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com