HDK ಸರ್ಕಾರದ ಬಜೆಟ್ ಮಂಡನೆಗೆ ನನ್ನ ಬೆಂಬಲವಿದೆ : ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದ ಸತೀಶ್‌ ಜಾರಕಿಹೊಳಿ

ಬೆಳಗಾವಿ : ಮೈತ್ರಿ ಸರ್ಕಾರದ ಹೊಸ ಬಜೆಟ್ ಮಂಡನೆ ಮಾಡುವ ವಿಚಾರವನ್ನು ನಾನು ಸಂಪೂರ್ಣ ಬೆಂಬಲಿಸುತ್ತೇನೆ ಎಂದು ಕಾಂಗ್ರೆಸ್ ನಾಯ ಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕೂಡ ಹೊಸ ಸರ್ಕಾರ ಬಂದಾಗ ಬಜೆಟ್ ಮಂಡನೆ ಮಾಡಲಾಗಿತ್ತು. ಈಗ ಹೊಸ ಸರ್ಕಾರ ಬಂದಿದೆ. ಆದ್ದರಿಂದ ಅವರೂ ಬಜೆಟ್ ಮಂಡನೆ ಮಾಡಬಹುದು. ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕಾರಣಕ್ಕೆ ಹೊಸ ಬಜೆಟ್ ಬೇಡ ಎಂದಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಅತೃಪ್ತರು ಸಭೆ ಮಾಡಬಾರದು ಎಂದು ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ. ಹೀಗಾಗಿ ನಾವು ಸಭೆ ಮಾಡುತ್ತಿಲ್ಲ. ಹೈಕಮಾಂಡ್‌ಗೆ ನಾವು ಗೌರವ ನೀಡುತ್ತೇವೆ. ಆದ್ದರಿಂದ ನಾವು ವೈಯಕ್ತಿಕವಾಗಿ ಚರ್ಚೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ಇಲ್ಲವಾದರೆ ಮತ್ತೆ ಅತೃಪ್ತ ಶಾಸಕರು ಅಸಮಾಧಾನ ಏಳುವ ಸಾಧ್ಯತೆಯಿದೆ ಎಂದಿದ್ದಾರೆ. ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತಮ್ಮ ಬೆಂಬಲಿಗರು ಹಾಗೂ ಮಾನವ ಬಂಧುತ್ವ ವೇದಿಕೆ ಮಂಗಳವಾರ ಬೆಂಗಳೂರು ಚಲೋ ಜಾಥಾ ಹಮ್ಮಿಕೊಂಡಿದ್ದು ಇದರಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com