ಇಂಗ್ಲೆಂಡ್ ಸರಣಿ : ಫಿಟ್ನೆಸ್ ಪರೀಕ್ಷೆಯಲ್ಲಿ ರಾಯುಡು ವಿಫಲ : ಏಕದಿನ ತಂಡದಲ್ಲಿ ರೈನಾಗೆ ಅವಕಾಶ

ಮುಂಬರುವ ಇಂಗ್ಲೆಂಡ್ ಸರಣಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎನ್ ಸಿಎ ಅಕಾಡೆಮಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗಾಗಿ ಜೂನ್ 15ರಂದು ಫಿಟ್ನೆಸ್ ಪರೀಕ್ಷೆ ನಡೆಸಲಾಗಿತ್ತು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಅಂಬಟಿ ರಾಯುಡು ವಿಫಲರಾಗಿರುವ ಕಾರಣ, ಅವರ ಸ್ಥಾನಕ್ಕೆ ಸುರೇಶ್ ರೈನಾ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಇಂಗ್ಲೆಂಡ್ ಹಾಗೂ ಭಾರತ ತಂಡಗಳ ನಡುವೆ 3 ಏಕದಿನ ಮತ್ತು 3 ಟಿ-20 ಪಂದ್ಯಗಳು ನಡೆಯಲಿದ್ದು, ಸರಣಿ ಜುಲೈ 3ಕ್ಕೆ ಆರಂಭಗೊಳ್ಳಲಿದೆ.

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡಿದ್ದ ಅಂಬಟಿ ರಾಯುಡು ಉತ್ತಮ ಪ್ರದರ್ಶನ ತೋರಿದ್ದರು. 2016ರ ಜೂನ್ ತಿಂಗಳಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಂಬಟಿ ರಾಯುಡು ಭಾರತದ ಪರವಾಗಿ ಕೊನೆಯ ಬಾರಿ ಆಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com