ಎಷ್ಟು ಕೋಟಿ ಇದ್ದರೂ ಸರಿಯೇ ರೈತರ ಸಾಲಮನ್ನಾ ಮಾಡಿಯೇ ತೀರುತ್ತೇನೆ : ಸಿಎಂ ಕುಮಾರಸ್ವಾಮಿ

ಬೆಂಗಳೂರು : ಸಮ್ಮಿಶ್ರ ಸರ್ಕಾರದ ರಾಜಧರ್ಮ ಪಾಲನೆ ಮಾಡುವ ಮೂಲಕ ಐದು ವರ್ಷ ಸುಭದ್ರ ಸರ್ಕಾರ ನಡೆಸುತ್ತೇವೆ. ಜೊತೆಗೆ ರೈತರ ಸಾಲ ಮನ್ನಾ ಮಾಡೇ ಮಾಡುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ನಡೆಸಿದ ಕುಮಾರಸ್ವಾಮಿ, ನಾನು ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಬಂದರೆ ಸಾಲ ಮನ್ನ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ನಮ್ಮ ಪಕ್ಷಕ್ಕೆ ಬಹುಮತ ಬಂದಿಲ್ಲ. ಕಾಂಗ್ರೆಸ್ ಜತೆಗೆ ಕೂಡಿ ಸರಕಾರ ಮಾಡಿದ್ದೇನೆ. ಆದರೂ ನಾನು ಸಾಲ ಮನ್ನಾ ಮಾತಿಗೆ ಬದ್ಧನಾಗಿದ್ದು, ರೈತರ ಸಾಲ ಸಾಲ ಎಷ್ಟು ಕೋಟಿ ಇದ್ದರೂ ಸರಿಯೇ ಮನ್ನಾ ಮಾಡಿಯೇ ತೀರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೆಲವರು ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ನಾನು ಅಧಿಕಾರ ಸ್ವೀಕರಿಸಿ 27 ದಿನಗಳಾಗಿದ್ದು ಇನ್ನೂ ಸರಿಯಾಗಿ ಉಸಿರಾಡಲು ಸಮಯ ಸಿಕ್ಕಿಲ್ಲ. ಇನ್ನೆರಡು ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದಿದ್ದಾರೆ.

ಮೊನ್ನೆ ನೀತಿ ಆಯೋಗದ ಸಭೆಯಲ್ಲೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಾಲ ಮನ್ನಾ ಮಾಡಲು ನೆರವು ಕೋರಿದ್ದೇನೆ. ರೈತರ ಸಾಲ ಮನ್ನಾ ಮಾಡಲು ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿದ್ದು, ರಾಜ್ಯದ ರೈತರಿಗೆ ಹೊರೆಯಾಗದಂತೆ ಸಾಲ ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

 

 

One thought on “ಎಷ್ಟು ಕೋಟಿ ಇದ್ದರೂ ಸರಿಯೇ ರೈತರ ಸಾಲಮನ್ನಾ ಮಾಡಿಯೇ ತೀರುತ್ತೇನೆ : ಸಿಎಂ ಕುಮಾರಸ್ವಾಮಿ

Leave a Reply

Your email address will not be published.