ಲಖ್ನೋ : ಹೋಟೆಲ್‍ನಲ್ಲಿ ಭಾರೀ ಅಗ್ನಿ ದುರಂತ : ಐದು ಜನರ ದುರ್ಮರಣ..

ಉತ್ತರಪ್ರದೇಶದ ರಾಜಧಾನಿ ಲಖ್ನೋದ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಮಂಗಳವಾರ ಅಗ್ನಿ ಅನಾಹುತ ಸಂಭವಿಸಿದ್ದು, 5 ಜನರು ಸಾವಿಗೀಡಾಗಿದ್ದಾರೆ. ಲಖ್ನೋದ ಚಾರ್ ಬಾಘ್ ಪ್ರದೇಶದಲ್ಲಿರುವ ವಿರಾಟ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ.

ವಿರಾಟ್ ಇಂಟರ್ನ್ಯಾಷನಲ್ ಹೋಟೆಲ್ ಪಕ್ಕದ ಎಸ್ಎಸ್ ಜೆ ಇಂಟರ್ ನ್ಯಾಷನಲ್ ಹೋಟೆಲ್ ಗೂ ಕೂಡ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೋಟೆಲ್ ಒಳಗಿದ್ದ 50ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದುರ್ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಮಗು ಸಾವನ್ನಪ್ಪಿದ್ದು, ಇನ್ನೂ ಹಲವಾರು ಜನ ಹೋಟೆಲ್ ಒಳಗೆ ಸಿಲುಕಿರಬಹುದೆಂದು ಪೋಲೀಸರು ಶಂಕಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com