ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ, ಬಿಜೆಪಿ ದೋಸ್ತಿ : ಮೆಹಬೂಬಾ ಮುಫ್ತಿ ರಾಜೀನಾಮೆ ಸಾಧ್ಯತೆ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಸರ್ಕಾರ ಮುರಿದುಬಿದ್ದಿದೆ. ಮೆಹಬೂಬಾ ಮುಫ್ತಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದಿದ್ದು, ಮೈತ್ರಿ ಸರ್ಕಾರದಿಂದ ಬಿಜೆಪಿ ಹೊರಬಂದಿದೆ.

ರಂಜಾನ್ ಬಳಿಕ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ನಡುವೆ ವೈಮನಸ್ಸು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ಪಕ್ಷದ ಶಾಸಕರ ಸಭೆ ಕರೆದಿದ್ದರು. ಸಭೆಯಲ್ಲಿ ಪಿಡಿಪಿಗೆ ನೀಡಿದ್ದ ಬೆಂಬಲ ವಾಪಸ್​ ಪಡೆಯಲು ತೀರ್ಮಾನಿಸಲಾಗಿದೆ.

2014ರಲ್ಲಿ 87 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆದಾಗ ಪಿಡಿಪಿ 28, ಬಿಜೆಪಿ 25, ನ್ಯಾಷನಲ್ ಕಾನ್ಫರೆನ್ಸ್ 15 ಮತ್ತು ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇತರರು 7 ಸ್ಥಾನಗಳಲ್ಲಿ ಗೆದ್ದಿದ್ದು, ಯಾರಿಗೂ ಬಹುಮತ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರಕಾರ ರಚನೆಯಾಗಿ ಪಿಡಿಪಿಯ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದರು.
ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಗೆ ಸರ್ಕಾರ ರಚಿಸಲು ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದೇವೆ. ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ಪಾಲಿಗೆ ಸರಿಯಲ್ಲ ಎನಿಸಿದೆ . ಆದ್ದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. 

Leave a Reply

Your email address will not be published.

Social Media Auto Publish Powered By : XYZScripts.com