ಕುಮಾರಸ್ವಾಮಿ ನೇತೃತ್ವದ ಸರ್ಕಾರದಿಂದ ರೈತರಿಗೆ ಸಿಕ್ಕಿದೆ ಶುಭಸುದ್ದಿ !! ಏನದು ?

ಮೈಸೂರು :   ಬಾರಿಯ ಬಜೆಟ್‌ನಲ್ಲಿ ಇಸ್ರೇಲ್ ತಂತ್ರಜ್ಞಾನಕ್ಕೆ ಆದ್ಯತೆ ನೀಡಿ ರೈತರ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಸಚಿವ ಶಿವಶಂಕರ್‌ ರೆಡ್ಡಿ ಹಿಂದಿನ ಸರ್ಕಾರದ ಬಜೆಟ್ ಯೋಜನೆಗಳನ್ನು ಮುಂದುವರಿಸುತ್ತೇವೆ. ಸಾಲಮನ್ನಾ ವಿಚಾರವಾಗಿ ಸರ್ಕಾರದ ರೂಪುರೇಷೆಗಳು ನಡೆಯುತ್ತಿದೆ. ಈ ಬಜೆಟ್ ಸಿಎಂ ಅವರ ಪೂರ್ಣ ಪ್ರಮಾಣದ ಬಜೆಟ್ ಆಗಲಿದೆ ಎಂದಿದ್ದಾರೆ.

ಮೈಸೂರಿನ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರಕ್ಕೆ ಸೂಚಿಸಿದ್ದೇವೆ. ಎಕರೆಗೆ ಎರಡೂವರೆ ಸಾವಿರ ಪರಿಹಾರ ನೀಡಲಾಗುವುದು. ತ್ವರಿತಗತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆಯಲಿದೆ.  ಕೃಷಿಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮ ಜಾರಿಯಾಗಲಿವೆ. ಕಬ್ಬು ಬೆಳೆಗೆ ಸಹಕಾರ ನೀಡಲಾಗುವುದು. ಅದರ ಜೊತೆಗೆ ಕಬ್ಬಿಗೆ ಸೂಕ್ತ ಬೆಲೆ ನಿಗಧಿ ಮಾಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳು ರೈತರಿಗೆ ಸಬ್ಸಿಡಿಯಲ್ಲಿ ದೊರೆಯಲಿವೆ. ಮಳೆಯಿಂದಾಗಿ ರಾಜ್ಯದಲ್ಲಿ 1803 ಹೆಕ್ಟೇರ್‌ನಷ್ಟು ಬೆಳೆ ನಷ್ಟವಾಗಿದೆ. ಹಾಗಾಗಿ ಎಲ್ಲಾ ವರ್ಗದ ರೈತರಿಗೂ ಬೆಳೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com