ರಾಹುಲ್ ಗಾಂಧಿ 48ನೇ ಜನ್ಮದಿನ : ಟ್ವಿಟರ್ನಲ್ಲಿ ಶುಭಕೋರಿದ PM ಮೋದಿ

ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ 48ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಸಿಕೊಂಡ ನಂತರ ಮೊದಲ ಬಾರಿಗೆ ರಾಹುಲ್ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದಂದು ಶುಭಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅವರ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ‘ ಎಂದು ಬರೆದುಕೊಂಡಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com