ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಬಸ್‌ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ ಸಾರಿಗೆ ಸಚಿವ !

ಬೆಂಗಳೂರು : ಸದ್ಯಕ್ಕೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್​ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತಿಳಿಸಿದ್ದಾರೆ.
 ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್​ ಪ್ರಯಾಣ​ ದರವನ್ನು ಶೇ. 15ರಷ್ಟು ಏರಿಕೆ ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಸದ್ಯಕ್ಕೆ ದರ ಏರಿಕೆ ಮಾಡುವ ಯೋಚನೆ ಇಲ್ಲ ಎಂದಿದ್ದಾರೆ. ಅಲ್ಲದೆ ಡೀಸೆಲ್‌ ಏರಿಕೆಯಿಂದಾಗಿ ಹೆಚ್ಚಿಗೆ ಖರ್ಚಾಗುತ್ತಿದೆ. ಆದರೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದು, ಇದರಿಂದ ಸರ್ಕಾರಕ್ಕೆ 500 ಕೋಟಿ ನಷ್ಟವಾಗಲಿದೆ ಎಂದಿದ್ದಾರೆ. ಅಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡುವ ವ್ಯವಸ್ಥೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
  ಸರ್ಕಾರಕ್ಕೆ ಕೆಟ್ಟ ಹೆಸರು ಬಾರದೇ ಇರಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com