ಮುಂದಿನ ಲೋಕಸಭಾ ಚುನಾವಣೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯುತ್ತೆ : ಪುಟ್ಟರಂಗಶೆಟ್ಟಿ

ಚಾಮರಾಜನಗರ : ಮುಂದಿನ ಲೋಕಸಭಾ ಚುನಾವಣೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಹೇಳಿದ್ದಾರೆ.
ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪುಟ್ಟರಂಗಶೆಟ್ಟಿ, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸುತ್ತಿದೆ ಎಂಬುದೆಲ್ಲಾ ಕೇವಲ ಊಹಾಪೋಹ. ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆ ಯುತ್ತಿರುವ ಸಿದ್ದರಾಮಯ್ಯ ಅವರನ್ನು ಈಗಾಗಲೇ ಸಚಿವ ಎಚ್.ಡಿ.ರೇವಣ್ಣ ಅವರು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಬಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರೇ ನಾಯಕರು. ಮುಂದಿನ ಲೋಕಸಭಾ ಚುನಾವಣೆ ಸಹ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ.

ಇದೇ ವೇಳೆ ಶಿಕ್ಷಕನ ಥಳಿತದಿಂದಾಗಿ ಕಣ್ಣು ಕಳೆದುಕೊಂಡ ಚಾಮರಾಜನಗರದ ರಾಮಸಮುದ್ರ ಬಡಾವಣೆಯ ವಿದ್ಯಾರ್ಥಿ ಮನೆಗೆ ಭೇಟಿ ನೀಡಿದ ಸಚಿವರು, ಕೂಡಲೇ ಶಾಲೆಯಿಂದ ಪರಿಹಾರ ಕೊಡಿಸಲಾಗುವು ದು. ಜೊತೆಗೆ ಆರೋಪಿ ಶಿಕ್ಷಕನನ್ನು ಶೀಘ್ರವೇ ಬಂಧಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com