ಮೈಸೂರು : ತೈಲ ಬೆಲೆ ಏರಿಕೆ ಹಿನ್ನೆಲೆ : ಮೋದಿ ಸರ್ಕಾರದ ವಿರುದ್ಧ CPI ಪ್ರತಿಭಟನೆ

ಮೈಸೂರಿನ ನ್ಯಾಯಾಲಯದ ಎದುರು ಭಾರತೀಯ ಕಮ್ಯುನಿಸ್ಟ್ ಪಕ್ಷ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪೆಟ್ರೋಲಿಯಂ ಉತ್ಪನ್ನಗಳ ಡೈನಾಮಿಕ್ ಪ್ರೈಸಿಂಗ್ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಹಾಲಿ ಇರುವ ಸುಂಕವನ್ನು ಅರ್ಧದಷ್ಟಾದರೂ ಕಡಿತಗೊಳಿಸಿ ೨೦೧೪ ರ ಸ್ಥಿತಿಗೆ ಮರಳಿಸುವಂತೆ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಯಂತ್ರಿಸುವ ಸಲುವಾಗಿ ಅಡ್ಮಿನ್ ಸ್ಟೆಟರ್ ಪ್ರೈಸಿಂಗ್ ಸಿಸ್ಟಂ ಜಾರಿಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com