ಕೇಂದ್ರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡುತ್ತಿದೆ : ಪರಮೇಶ್ವರ್

ತುಮಕೂರಿನಲ್ಲಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಡಿಕೆಶಿಗೆ ಐಟಿ ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು ‘ ನೋಟಿಸ್ ಗೆ ಡಿಕೆಶಿ ಉತ್ತರ ಕೊಡ್ತಾರೆ. ಅದರ ಹೊರತು ಏನೂ ಇಲ್ಲ. ಕೇಂದ್ರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡುತ್ತಿದೆ. ಕೇಂದ್ರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಐಟಿ ದಾಳಿಯಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ‘ ಎಂದಿದ್ದಾರೆ.

‘ ಸರ್ಕಾರ ಐದು ವರ್ಷ ಪೂರೈಸುತ್ತದೆ. ಸಿಎಂ ಕುಮಾರಸ್ವಾಮಿ ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾಗೂ ನೀತಿ ಆಯೋಗದ ಸಭೆಗಾಗಿ ಹೋಗದ್ದರು. ಯಾವುದೇ ರಾಜಕೀಯ ಉದ್ದೇಶದಿಂದ ರಾಹುಲ್ ಗಾಂಧಿಯವರನ್ನ ಭೇಟಿಯಾಗಿಲ್ಲ. ಬಜೆಟ್ ಮಂಡನೆ ಮಾಡಬೇಕು ಅನ್ನೋ ತೀರ್ಮಾನ ಆಗಿದೆ. ಬಜೆಟ್ ಮಂಡನೆ ಮಾಡುತ್ತೇವೆ. ಸಾಲ ಮನ್ನಾಗೆ ಎರಡೂ ಪಕ್ಷದ ಒಲುವು ಇದೆ. ಸಾಧ್ಯತೆ ನೋಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ‘ ಎಂದು ಹೇಳಿದ್ದಾರೆ.

One thought on “ಕೇಂದ್ರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡುತ್ತಿದೆ : ಪರಮೇಶ್ವರ್

Leave a Reply

Your email address will not be published.

Social Media Auto Publish Powered By : XYZScripts.com