ಜಯನಗರ : ‘ಅದಮ್ಯ ಚೇತನ’ ವತಿಯಿಂದ ಜೂನ್ 23ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅದಮ್ಯ ಚೇತನದ ವತಿಯಿಂದ ಜೂನ್ 23 ರಂದು ಜಯನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಅವರ ಆಶಯವನ್ನು ಜನ ಸಾಮಾನ್ಯರಿಗೆ ತಲುಪಿಸುವ ಗುರಿಯ ಹಿನ್ನಲೆಯಲ್ಲಿ ಜೂನ್ 23 ರಂದು ಜಯನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಅದಮ್ಯ ಚೇತನ ಮುಖ್ಯಸ್ಥೆ ತೇಜಸ್ವೀನಿ ಅನಂತಕುಮಾರ್ ಹೇಳಿದ್ದಾರೆ.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯ ತಾಲೀಮು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 23 ರಂದು ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಅದಮ್ಯ ಚೇತನ ಹಾಗೂ ಬಿ ಎನ್ ಎಮ್ ಐ ಟಿ ಸಹಯೋಗದಲ್ಲಿ ಆಯೋಜಿಲಾಗಿರುವ ಈ ಕಾರ್ಯಕ್ರಮದಲ್ಲಿ 10 ಸಾವಿರ ಜನರು ಭಾಗವಹಿಸಲಿದ್ದಾರ ಎಂದರು.

ಕೇಂದ್ರ ಸಚಿವ ಅನಂತಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಚಕ್ರವರ್ತಿ ಸೂಲಿಬೆಲೆ ಅವರು ಅಂದು ಯೋಗದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಪರಿಷತ್ ಸದಸ್ಯೆ ತಾರಾ ಅನುರಾಧಾ, ಶಾಸಕರಾದ ರವಿ ಸುಬ್ರಮಣ್ಯ ಹಾಗೂ ಉದಯ ಗರಢಾಚಾರ್, ಬಿ ಎನ್ ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ನಾರಾಯಣ ರಾವ್ ಆರ್ ಮಾನೆ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಶಾಲೆಯ ಮಕ್ಕಳು ಭಾಗಿಯಾಗಲಿದ್ದಾರೆ. ಸರಕಾರಿ ಶಾಲೆಯ ಮಕ್ಕಳಿಗೆ ಆದ್ಯತೆ ನೀಡಲಾಗಿದ್ದು, ಜನ ಸಾಮಾನ್ಯರೂ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದಾಗಿದೆ. ಇಂದು ನಡೆದ ಪೂರ್ವ ತಾಲೀಮು ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಜನರು ಪಾಲ್ಗೊಂಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com