ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್‌ ನೇಮಕ

ಬೆಂಗಳೂರು : ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಒಂದೊಂದೇ ಬದಲಾವಣೆಯಾಗತೊಡಗಿದ್ದು, ಈಗ  ಕರ್ನಾಟಕ ಚಲ ನಚಿತ್ರ ಅಕಾಡೆಮಿಗೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯಪಾಲರ ಆದೇಶಾನುಸಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಜಿ.ಹೆಚ್.ಅನಸೂಯಮ್ಮ, ಚಲನಚಿತ್ರ ಅಕಾಡಮಿ ಅಧ್ಯಕ್ಷ ಸ್ಥಾನಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಹೊಸ ಸರ್ಕಾರ ಬರುತ್ತಿದ್ದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ನಿಗಮ ಮಂಡಳಿ, ಅಕಾಡೆಮಿಗಳ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿದ್ದು, ಇದೀಗ‌ ಹೊಸದಾಗಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com