ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಗೆ ಅಂಕಿತ ಹಾಕಿದ ರಾಷ್ಟ್ರಪತಿ ಕೋವಿಂದ್

ದೆಹಲಿ : ಪಿಡಿಪಿ ಜೊತೆ ಬಿಜೆಪಿ ಮೈತ್ರಿ ಮುರಿದುಕೊಂಡ ಬಳಿಕ ಸಂಖ್ಯಾಬಲದ ಕೊರತೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅಂಕಿತ ಹಾಕಿದ್ದಾರೆ.

ಮೂರೂವರೆ ವರ್ಷಗಳಿಂದ ಜೊತೆಗಿದ್ದ ಮೈತ್ರಿ ಸರ್ಕಾರ ಮಂಗಳವಾರ ಮುರಿದುಬಿದ್ದಿದ್ದು, ಸಿಎಂ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ರಾಜ್ಯಪಾಲ ಎನ್‌.ಎನ್‌ ವೋಹ್ರಾ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ಶಿಫಾರಸ್ಸು ಮಾಡಿದ್ದು, ರಾಷ್ಟ್ರಪತಿಗಳಿಗೆ  ವರದಿ ಕಳಿಸಿದ್ದರು. ಈಗ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. 2008ರಿಂದ ಜಮ್ಮುಕಾಶ್ಮೀರದಲ್ಲಿ ನಾಲ್ಕು ಬಾರಿ ರಾಜ್ಯಪಾಲರ ಆಳ್ವಿಕೆ ನಡೆದಿತ್ತು.

ರಂಜಾನ್ ಬಳಿಕ ಕದನ ವಿರಾಮ ಘೋಷಣೆ ಕೈಬಿಟ್ಟು ಉಗ್ರರ ನಿಗ್ರಹ ಕಾರ್ಯಾಚರಣೆಗೆ ಮತ್ತೆ ಚಾಲನೆ ನೀಡುವ ಕೇಂದ್ರದ ನಿರ್ಧಾರಕ್ಕೆ ಪಿಡಿಪಿ ಅಸಮಾಧಾನ ವ್ಯಕ್ತಪಡಿಸಿ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com