ರಾಜೀನಾಮೆ ನೀಡ್ತಾರಾ ಡಿಕೆಶಿ : ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದಾದರೂ ಏನು ?

ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನಿಂದ ಸಚಿವರಾಗಿರುವ ಡಿ.ಕೆ ಶಿವಕುಮಾರ್‌ ವಿರುದ್ದ ಹವಾಲಾ ಹಣದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಡಿಕೆಶಿ ವಿರುದ್ಧ ದೊಡ್ಡ ದೊಡ್ಡ ಆರೋಪ ಕೇಳಿಬರುತ್ತಿದೆ. ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರೇಕೆ ರಾಜೀನಾಮೆ ನೀಡಬೇಕು. ಅವರ ಬೆಂಬಲಕ್ಕೆ ನಾವೆಲ್ಲರೂ ಇದ್ದೇವೆ ಎಂದಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಡಿಕೆಶಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿದ್ದಾರೆ. ಅದನ್ನೇ ದೊಡ್ಡದಾಗಿ ಬಿಂಬಿಸಬಾರದು. ಅವರಿಗೆ ಕಾೂನಾತ್ಮಕವಾಗಿ ಹೋರಾಟ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದಿದ್ದಾರೆ.

ಅಲ್ಲದೆ ಬಿಜೆಪಿಯವರ ಮೇಲೂ ಆರೋಪಗಳು ಕೇಳಿಬಂದಿತ್ತು. ಅವರು ಎಷ್ಟು ಜನ ರಾಜೀನಾಮೆ ನೀಡಿದ್ದಾರೆ ತಿಳಿಸಲಿ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com