ಮಂಡ್ಯ : ಜಮೀನು ವಿವಾದ ಹಿನ್ನೆಲೆ : ಮಹಿಳೆ ಜೊತೆ ಅಸಭ್ಯ ವರ್ತನೆ, ಹಲ್ಲೆ

ಜಮೀನು ವಿವಾದ ಹಿನ್ನೆಲೆಯಲ್ಲಿ, ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕು ಬಿ.ಬಿ.ಕಾವಲ್ ಗ್ರಾಮದಲ್ಲಿ ಘಟನೆ ನಡೆದಿದೆ. ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ನೊಂದ ಮಹಿಳೆ ಆರೋಪಿಸಿದ್ದಾರೆ.

ಕಾಳೇಗೌಡ(60), ಚೇತನ್(30) ಮತ್ತು ಪ್ರವೀಣ್(28) ಎಂಬುವರಿಂದ ಕೃತ್ಯ ನಡೆದಿದೆ. ಪ್ರೇಮಮ್ಮ ಎಂಬುವರ ಜೊತೆ ಅಸಭ್ಯವಾಗಿ ವರ್ತಿಸಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಅಸಭ್ಯ ವರ್ತನೆ ದೃಶ್ಯ ಮೊಬೈಲ್‌ನಲ್ಲೆ ಸೆರೆಯಾಗಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com