ಯೋಗ ಒಂದು ದಿನಕ್ಕೆ ಸೀಮಿತವಾಗದೇ ಬದುಕಿನ ಅವಿಭಾಜ್ಯ ಅಂಗವಾಗಬೇಕು : ಯಡಿಯೂರಪ್ಪ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಬಿಜೆಪಿ ಕಚೇರಿ ಎದುರು ಯೋಗ ಪ್ರದರ್ಶನ ನಡೆಯಿತು. ಬಿಜೆಪಿ ಮಹಿಳಾ ಮೊರ್ಚಾ ಅಧ್ಯಕ್ಷೆ ಶಕುಂತಲಾ ಶೆಟ್ಟಿ, ಅಬ್ದುಲ್ ಅಜೀಂ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯೋಗಾಭ್ಯಾಸ ನಡೆದಿದ್ದು, ಯೋಗ ಪ್ರದರ್ಶನದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಬಿಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ‘ ಸ್ವಾಮಿ ವಿವೇಕಾನಂದರು ಹೇಳಿದಂತೆ ಯೋಗ ಮನಸ್ಸನ್ನು ಶಕ್ತಿಯುತ ಹಾಗೂ ಶಿಸ್ತುಬದ್ದಗೊಳಿಸಲಿದೆ. ಯೋಗ ಕೇವಲ ದೈಹಿಕ ವ್ಯಾಯಾಮ ಮಾತ್ರವಲ್ಲ, ಶರೀರ, ಬುದ್ದಿ, ಮನಸ್ಸು ಸಮತೋಲನ ಸಾಧಿಸುವ ಜೀವನ ವಿಧಾನ ‘ ಎಂದಿದ್ದಾರೆ.

‘ ನಮ್ಮಲ್ಲಿನ ಶಕ್ತಿಯನ್ನು ಕಂಡುಕೊಳ್ಳುವುದೇ ಯೋಗ, ಪುರಾತತ ಯೋಗ ಪದ್ದತಿ ನಮ್ಮ ದೇಶದ ಹೆಮ್ಮೆಯಾಗಿದೆ. ದೇಹ ದೇವಾಲಯವಿದ್ದಂತೆ ಅದನ್ನು ಶುದ್ದಿಯಾಗಿಟ್ಟುಕೊಳ್ಳುವುದೇ ಯೋಗ, ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ. ಅಂತಾರಾಷ್ಟ್ರೀಯ ಯೋಗ ದಿನ ಎಂದು ವಿಶ್ವಸಂಸ್ಥೆ ಘೊಷಿಸಿದೆ. ಇದರ ಯಶಸ್ಸು ಮೋದಿಗೆ ಸಲ್ಲಬೇಕು ‘ ಎಂದಿದ್ದಾರೆ.

‘ ಯೋಗ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡುವ ಅಗತ್ಯವಿದೆ. ದೈಹಿಕ ಮಾನಸಿಕ ಸದೃಢತೆ ಬೆಳೆಸಿಕೊಳ್ಳಬೇಕು. ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕು. ಯೋಗ ದಿನಕ್ಕೆ ಮಾತ್ರ ಯೋಗಾಸನ ಮಾಡುವುದು ಸೀಮಿತವಾಗದೆ ಯೋಗ ನಮ್ಮ ಬದುಕಿನ ದೈನಂದಿನ ಅವಿಭಾಜ್ಯ ಅಂಗವಾಗಬೇಕು ‘ ಎಂದು ಹೇಳಿದ್ದಾರೆ.

Leave a Reply

Your email address will not be published.