ಬೆಳ್ಳಂ ಬೆಳಗ್ಗೆ ಹೊತ್ತಿ ಉರಿದ ಅಗರಬತ್ತಿ ಫ್ಯಾಕ್ಟರಿ : ಬೆಂಕಿ ನಂದಿಸಲು ಸಿಬ್ಬಂದಿಗಳ ಹರಸಾಹಸ

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ ಸ್ಥಳಕ್ಕೆ ತೆರಳಿದ್ದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಅಕ್ಕ ಪಕ್ಕದ ಕಟ್ಟಡಗಳಿಗೆ ವ್ಯಾಪಿಸುವ ಮೊದಲೇ ಅಗ್ನಿ ಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ  ಯಶಸ್ವಿಯಾಗಿದ್ದಾರೆ.
ಅಷ್ಟರಲ್ಲಿ ಅಗರಬತ್ತಿ ಫ್ಯಾಕ್ಟರಿಯಲ್ಲಿದ್ದ ಎಲ್ಲ ವಸ್ತುಗಳೂ ಬೆಂಕಿಗಾಹುತಿಯಾಗಿವೆ, ಫ್ಯಾಕ್ಟರಿ ತುಂಬ ಅಗರಬತ್ತಿಗಳೇ ಇದ್ದುದರಿಂದಾಗಿ ಬೆಂಕಿ ಕ್ಷಣ ಮಾತ್ರದಲ್ಲಿ ಹೊತ್ತಿಕೊಂಡು ಇಡೀ ಫ್ಯಾಕ್ಟರಿಗೆ ವ್ಯಾಪಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಲೇ ಫ್ಯಾಕ್ಟರಿಯಲ್ಲಿದ್ದ ಮೂವರು ನೌಕರರು ಎಚ್ಚರಗೊಂಡು ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿಶಾಮಕ ಮಾರ್ಗಸೂಚಿಗಳನ್ನು ಅನುಸರಿಸದೇ ಇರುವುದರಿಂದ ಈ ಅವಘಡ ಸಂಭವಿಸಿದೆ ಎಂಬುದು  ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಸಂಬಂಧ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com