J&K : ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರ ಹತ್ಯೆ : ಐಸಿಸ್ ನಂಟು ಹೊಂದಿದ್ದ ISJK ಮುಖ್ಯಸ್ಥ ಬಲಿ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ರಕ್ಷಣಾ ಪಡೆಗಳು ಶುಕ್ರವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈದಿದೆ. ಜಾಗತಿಕ ಉಗ್ರ ಸಂಘಟನೆ ಐಸಿಸ್ ನ ಜಮ್ಮು ಕಾಶ್ಮೀರದ ಮುಖ್ಯಸ್ಥನೂ ರಕ್ಷಣಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ. ಈತ ಐಸಿಸ್ ನೊಂದಿಗೆ ನಂಟು ಹೊಂದಿದೆ ಎನ್ನಲಾಗಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಕಾಶ್ಮೀರ (ISJK) ಸಂಘಟನೆಯ ಮುಖ್ಯಸ್ಥನಾಗಿದ್ದ.

ಉಗ್ರರ ಇರುವಿಕೆಯ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆಯಲ್ಲಿ ಭಯೋತ್ಪಾದಕರು ಹಾಗೂ ಸೇನೆಯ ಅಧಿಕಾರಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ನಂತರ ನಡೆಸಲಾಗಿರುವ ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರು ಬಲಿಯಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com