ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ : ಕೇಂದ್ರಕ್ಕೆ ಪತ್ರ ಬರೆಯುತ್ತೇನೆಂದ ಕುಮಾರಸ್ವಾಮಿ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಲ್ಲಿ ಕೇಂದ್ರ ಸರ್ಕಾರ  ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ. ಪ್ರಾಧಿಕಾರ ರಚನೆ ಬಗ್ಗೆ ಲೋಕಸಭೆಯಲ್ಲಿ ಚರ್ಚಿಸುವಂತೆ ಕೇಳಿಕೊಂಡಿದ್ದೆವು. ಆದರೆ ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಾಧಿಕಾರ ರಚನೆ ಬಗ್ಗೆ ಮರುಪರಿಶೀಲನೆ ಮಾಡುವಂತೆ ಕೇಂಧ್ರ ಸರ್ಕಾರಕ್ಕೆ ಮತ್ತೆ ಪತ್ರ ಬರೆಯುತ್ತೇನೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com