ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಿಸಲು RSS ಜೊತೆ ಕೈ ಜೋಡಿಸಿದ ಬಿಜೆಪಿ ?

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ನಾಯಕರು ಆರ್‌ಎಸ್‌ಎಸ್‌ ಮುಖಂಡರನ್ನು ಭೇಟಿ ಮಾಡಿದ್ದಾರೆ.

ಚಾಮರಾಜಪೇಟೆಯ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದ ಬಿಜೆಪಿ ನಾಯಕ ಯಡಿಯೂರಪ್ಪ, ಕೇಂದ್ರ ಸಚಿವ, ಸದಾನಂದಗೌಡ,  ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ , ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲ್ಲಿಸಲು ಸಿದ್ಧತೆ ನಡೆಸಿರುವುದಾಗಿ ಹೇಳಲಾಗುತ್ತಿದೆ. ಅಲ್ಲದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸಲು ಪ್ಲ್ಯಾನ್ ಮಾಡಿರುವುದಾಗಿ ಹೇಳಲಾಗಿದೆ.

ಸದ್ಯ ಪ್ರಧಾನಿ ಮೋದಿಯವರ ಕೆಲಸಗಳನ್ನು ಜನರಿಗೆ ತಲುಪಿಸುವ  ಕೆಲಸ ನಡೆಯಬೇಕಿದ್ದು, ಇಲ್ಲದಿದ್ದರೆ ಚುನಾವಣೆಯಲ್ಲಿ ಗೆಲುವು ಕಷ್ಟ ಎಂದು ಬಿಜೆಪಿ ನಾಯಕರು ಅರಿತಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ನಾಯಕರ   ಸಹಕಾರದಿಂದ ಮೋದಿಯವರ ಕೆಲಸವನ್ನು ಜನರಿಗೆ ತಲುಪಿಸುವ ಕೆಲಸ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣೆಯ ರಣತಂತ್ರ ರೂಪಿಸಬೇಕು ಎಂಬ ನಿಲುವಿಗೆ ಬಿಜೆಪಿ ನಾಯಕರು ಬಂದರು ಎನ್ನಲಾಗಿದೆ.

ಮತ್ತೊಂದೆಡೆ ರಾಜ್ಯದಲ್ಲೂ ಬಿಜೆಪಿಗೆ ಅಧಿಕಾರ ಸಿಕ್ಕದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಜೊತೆ ಮತ್ತೆ ಬಿಜೆಪಿ ಕೈ ಜೋಡಿಸಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com