ಚಿಕ್ಕಬಳ್ಳಾಪುರ : ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ..ಏನದು ?

ಚಿಕ್ಕಬಳ್ಳಾಪುರ : ಮಕ್ಕಳ ಸಂತಸವನ್ನು ಹೆಚ್ಚು ಮಾಡಲು ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯ ಸರಕಾರಿ ಶಾಲೆಗಳ ಒಂದರಿಂದ ಏಳನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ತಿಂಗಳಲ್ಲಿ ಎರಡು ಶನಿವಾರ ‘ಬ್ಯಾಗ್‌ ರಹಿತ ದಿನ’ವನ್ನಾಗಿ ಘೋಷಿಸಿದ್ದು, ಶನಿವಾರ ಪ್ರಾಯೋಗಿಕವಾಗಿ ಜಾರಿಗೆ ತರಲಾಯಿತು.

‘ಇನ್ನು ಮುಂದೆ ತಿಂಗಳಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರವನ್ನು ‘ಬ್ಯಾಗ್‌ ರಹಿತ ದಿನ’ವನ್ನಾಗಿ ಆಚರಿಸಲಾಗುತ್ತದೆ. ಆ ದಿನ ಮಕ್ಕಳು ಪಠ್ಯಕ್ರಮಕ್ಕೆ ಪೂರಕವಾಗಿ ತಮಗಿಷ್ಟವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್.ಶಿವಣ್ಣ ರೆಡ್ಡಿ ತಿಳಿಸಿದರು.

ಶಿಕ್ಷಣ ಕ್ಷೇತ್ರದ ಬಗ್ಗೆ ತಮ್ಮದೇ ಆದ ಕನಸುಗಳನ್ನು ಹೊಂದಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್ ಅವರ ಆಸಕ್ತಿಯ ಫಲವಾಗಿ ಇಂತಹದೊಂದು ಹೊಸ ಪ್ರಯೋಗ ಜಿಲ್ಲೆಯಲ್ಲಿ ಆರಂಭಗೊಂಡಿದ್ದು. ಶನಿವಾರ ಮಕ್ಕಳು ಬ್ಯಾಗ್‌ ಇಲ್ಲದೆ ಸಂತಸದಿಂದ  ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಖುಷಿಯಿಂದ ಕಾಲ ಕಳೆಯಲಿದ್ದಾರೆ.

ಈ ಪ್ರಯೋಗ ಎರಡು ತಿಂಗಳು ಅವಲೋಕಿಸಿ ಬಳಿಕ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅಭಿಪ್ರಾಯ ಪಡೆದು ಇದರಿಂದ ಉತ್ತಮ ಪರಿಣಾಮವಾಗುತ್ತಿರುವುದು ಕಂಡು ಬಂದರೆ ಮುಂಬರುವ ದಿನಗಳಲ್ಲಿ ಪ್ರತಿ ಶನಿವಾರಕ್ಕೂ ವಿಸ್ತರಿಸಲು ಉದ್ದೇಶಿಸಿದ್ದೇವೆ’ ಎಂದು ಎಚ್.ವಿ.ಮಂಜುನಾಥ್ ತಿಳಿಸಿದ್ದಾರೆ.

Leave a Reply

Your email address will not be published.