ಕೊಡಗು : ಸೆಲ್ಫೀ ತೆಗೆದುಕೊಳ್ಳುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದು ಯುವಕನ ಸಾವು..

ಕೊಡಗು : ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಜಲಪಾತಕ್ಕೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕುಶಾಲನಗರ ಸಮೀಪದ ಸುಂದರನಗರ ನಿವಾಸಿ ಮನೋಜ್ (24) ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಮನೋಜ್ ತನ್ನ ಸ್ನೇಹಿತರೊಂದಿಗೆ ಮಲ್ಲಳ್ಳಿಯ ಜಲಪಾತ ನೋಡಲು ತೆರಳಿದ್ದ. ಈ ವೇಳೆ ಸೆಲ್ಫೀ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾನೆ. ತಡರಾತ್ರಿ ಘಟನೆ ನಡೆದ ಕಾರಣ ಶನಿವಾರ ಮೃತದೇಹವನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯಲಿದೆ.

Leave a Reply

Your email address will not be published.