ಸಮ್ಮಿಶ್ರ ಸರ್ಕಾರದ ಸಾಲಮನ್ನಾ ವಿಚಾರ : ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ತಮ್ಮ ಎರಡು ಕೆಜಿ ತೂಕ ಇಳಿಸಿಕೊಂಡಿದ್ದು ಧನಾತ್ಮಕ ವಿಚಾರವಾದರೆ, ರಾಜ್ಯ ಸಮ್ಮಿಶ್ರ ಸರ್ಕಾರದ ಸಾಲಮನ್ನಾ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಋಣಾತ್ಮಕ ಬೆಳವಣಿಗೆಯಾಗಿ ಗೋಚರಿಸಿದೆ. ಸಮ್ಮಿಶ್ರ ಸರ್ಕಾರ ಮತ್ತೊಮ್ಮೆ ಬಜೆಟ್ ಮಂಡಿಸುವ ಬಗ್ಗೆ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೆಲ್ಲಾ ಬೆಳವಣಿಗೆ ಗಮನಿಸಿದರೆ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸಹಕಾರ ಸಿಗುವುದಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಗ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ವೈರಲ್ ಆಗಿದೆ. ಅದರಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ, ಕುಮಾರಸ್ವಾಮಿ ಸಾಲಮನ್ನಾ ನಿರ್ಧಾರ, ಪರಮೇಶ್ವರ್, ಅತೃಪ್ತ ಶಾಸಕರಾದ ಎಂ.ಬಿ. ಪಾಟೀಲ್, ಡಾ. ಕೆ. ಸುಧಾಕರ್ ವಿರುದ್ಧವೂ ಬೇಸರ ವ್ಯಕ್ತಪಡಿಸಿದ್ದಾರೆ ತಿಳಿದುಬಂದಿದೆ .

Leave a Reply

Your email address will not be published.

Social Media Auto Publish Powered By : XYZScripts.com