ಮಾಜಿ ಸಿಎಂ ಸಿದ್ದರಾಮಯ್ಯಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ನಿರ್ಧಾರ..?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರಿಗೆ  ಸಂಪುಟ ದರ್ಜೆ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಸಂಪುಟ  ದರ್ಜೆ ಸ್ಥಾನಮಾನ ನೀಡಲು ಸಿಎಂ ಕುಮಾರಸ್ವಾಮಿ ಅವರು   ತೀರ್ಮಾನಿಸಿದ್ದಾರೆ. ಈ ಕುರಿತು ಸೋಮವಾರ ಸಂಜೆಯೊಳಗೆ  ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರಿಗೆ  ಸರಕಾರ ಈಗಾಗಲೇ ವಿಧಾನ ಸೌಧದ ಕೊಠಡಿಯನ್ನು ನೀಡಿದೆ.

ಈ ಬಗ್ಗೆ   ಮಾತನಾಡಿದ ಡಿಸಿಎಂ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೂ ಅಧಿಕೃತವಾಗಿ ಕ್ಯಾಬಿನೆಟ್ ದರ್ಜೆ ನೀಡಲು ತೀರ್ಮಾನಿಸಲಾಗಿದೆ. ಆ ಸ್ಥಾನಕ್ಕೊಂದು ಬೆಲೆ ಬರಬೇಕು. ಸಮಿತಿಯ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ನೀಡಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

One thought on “ಮಾಜಿ ಸಿಎಂ ಸಿದ್ದರಾಮಯ್ಯಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ನಿರ್ಧಾರ..?

Leave a Reply

Your email address will not be published.