ದಾವಣಗೆರೆ : ಬೆಂಕಿ ಹೊತ್ತಿ ಧಗಧಗನೆ ಉರಿದ ಕಾರು : ತಪ್ಪಿದ ಭಾರೀ ಅನಾಹುತ

ದಾವಣಗೆರೆ : ಕಾರಿಗೆ ಬೆಂಕಿ ಹೊತ್ತಿ ಧಗಧಗನೆ ಉರಿದಿರುವ ಘಟನೆ ದಾವಣಗೆರೆ ಜಿಲ್ಲೆಯ‌ ಹರಿಹರ ತಾಲ್ಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದ್ದು, ಕಾರಿನಲ್ಲಿ ಬೆಂಕಿ ಕಂಡು ಪ್ರಯಾಣಿಕರು ಕೆಳಗಿಳಿದಿದ್ದಾರೆ.

ರೆನಾಲ್ಟ್ ಕಂಪನಿಯ ಕ್ವಿಡ್ ಕಾರು ಬೆಂಕಿಗಾಹುತಿಯಾಗಿ ಧಗಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಾವಣಗೆರೆಯ ಸಿದ್ದರಾಜೂ ಸೇರಿ 6 ಮಂದಿ ಪಾರಾಗಿದ್ದಾರೆ. ಕಾರ್ಯಕ್ರಮ ನಿಮಿತ್ತ ಮಲೆಬೆನ್ನೂರಿಗೆ ಕುಟುಂಬ ಪ್ರಯಾಣಿಸುತ್ತಿತ್ತು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com