ಕೊಪ್ಪಳ : ವಿದ್ಯುತ್ ಶಾಕ್ ತಗುಲಿ ಇಬ್ಬರ ಸಾವು : KEB ಅಧಿಕಾರಿಗಳ ನಿರ್ಲಕ್ಯಕ್ಕೆ ಆಕ್ರೋಶ

ಕೊಪ್ಪಳ : ವಿದ್ಯುತ್ ಶಾಕ್ ಹೊಡೆದು ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬದಲ್ಲಿ ಕೆಲಸ ಮಾಡುವ ವೇಳೆ ಹನುಮಂತಪ್ಪ ಗಂಜಿ(40), ಮೆಹಬೂಬ್ ಸಾಬ(28) ಎಂಬ ಕಾರ್ಮಿಕರು ಮೃತರಾಗಿದ್ದಾರೆ.

ಹಿರೇಬೆಣಕಲ್ ಗ್ರಾಮದ ಸುಬ್ಬರಾವ್ ಎನ್ನುವ ಜಮೀನಿನಲ್ಲಿ ಘಟನೆ ನಡೆದಿದ್ದು, ಮೃತರು ವೆಂಕಟಗಿರಿ ಗ್ರಾಮದವರಾಗಿದ್ದು, ಕೂಲಿ ಕೆಲಸಕ್ಕಾಗಿ ಬಂದಿದ್ದರು. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಬ್ಬರು ಬಲಿಯಾಗಿದ್ದಾರೆ. ಅಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದೆ. ಗಂಗಾವತಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com