ಈ ಬಾರಿ ನಾನು ಬಜೆಟ್ ಮಂಡನೆ ಮಾಡುತ್ತೀನೋ ಇಲ್ಲವೋ ಗೊತ್ತಿಲ್ಲ : ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ

ಬೆಂಗಳೂರು : ನಾನು ಬಜೆಟ್ ಮಂಡಿಸುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ಸಿಎಂ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಿಂದಿನ ಬಜೆಟನ್ನು ಮುಂದುವರಿಸಿಕೊಂಡು ಹೋದರೆ 100 ಮಂದಿ ಶಾಸಕರಿಗೆ ತೊಂದರೆಯಾಗುತ್ತದೆ.  ಕೆಲ  ಶಾಸಕರು ಲೋಕಸಭಾ ಚುನಾವಣೆ ಬಳಿಕ ಬಜೆಟ್ ಮಂಡನೆ ಮಾಡಿ ಎನ್ನುತ್ತಿದ್ದಾರೆ. ಆದ್ದರಿಂದ ನಾನು ಬಜೆಟ್‌ ಮಂಡಿಸುತ್ತೇನೋ ಇಲ್ಲವೋ ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಯಾರ ಹಂಗಿನಲ್ಲೂ ಇಲ್ಲ ಎಂದಿರುವ ಕುಮಾರಸ್ವಾಮಿ, ನನಗೆ ಯಾರು ಭಿಕ್ಷೆ ಕೊಟ್ಟಿಲ್ಲ .ಈ ಸರ್ಕಾರ ಎಷ್ಟು ದಿನ‌ ಇರುತ್ತೋ ಇಲ್ಲವೋ ಗೊತ್ತಿಲ್ಲ ಅದಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸಾಲ ಮನ್ನಾ ಮಾಡಬೇಡಿ ಎಂದು ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳುತ್ತಿರುವುದು ನನ್ನ ಗಮನಕ್ಕೂ ಬಂದಿರುವುದಾಗಿ ಹೇಳಿದ್ದಾರೆ.

ಇದೇ ವೇಳೆ  ಈ ಹಿಂದಿನ ಕಾಂಗ್ರೆಸ್ ಸರ್ಕಾರ ಈಗಾಗಲೇ ಸಹಕಾರಿ ಬ್ಯಾಂಕ್ ಗಳಲ್ಲಿನ 8 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 10 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಬೇಕು. ಮುಂದಿನ ಮಾರ್ಚ್ ಅಂತ್ಯದವರಗಿನ ಸಾಲ ಮನ್ನಾ ಮಾಡಬೇಕು ಎಂಬ ಒತ್ತಾಯವಿದೆ. ಅದೇ ವೇಳೆ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿರೋದ್ರಿಂದ 16,000 ಕೋಟಿ ರೂ.ಹೆಚ್ಚಿನ ಹೊರೆಯಾಗಿದ್ದು ರೈತರ ಸಾಲಮನ್ನ ಮಾಡುವುದು ಕಷ್ಟವಾಗಲಿದೆ ಎಂದಿದ್ದಾರೆ.

Leave a Reply

Your email address will not be published.